

ಮಾ. 18ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸುಳ್ಯ
ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ
ವೆಂಕಟೇಶ್ವರ ಸಭಾ ಭವನದಲ್ಲಿ ದ.ಕ.ಜಿಲ್ಲಾಧಿಕಾರಿ
ಎಂ.ಆರ್.ರವಿಕುಮಾರ್ ಅವರು ಗ್ರಾಮ ವಾಸ್ತವ್ಯ
ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯ
ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು
ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ
ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
add a comment