ರಾಜ್ಯ

ಕಾಪು: ಮುಸ್ಲಿಂ ಯುವಕನ ಜತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌- ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು.

ಕಾಪು: ತಿಂಗಳ ಹಿಂದೆ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಆಗುಂಬೆ ಸಮೀಪದ ಸಿರಿ‌ಮನೆ ಫಾಲ್ಸ್ ಗೆ ಹೋಗಿ ವಾಪಸ್ ಬರುವಾಗ ಹಿಂದೂ ಕಾರ್ಯಕರ್ತರು ತಡೆದು ವಿಚಾರಣೆ ಮಾಡಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಯುವತಿಯ ಸಹೋದರ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಒಂದು ತಿಂಗಳ ಹಿಂದೆ ಬೈಕ್ ನಲ್ಲಿ ಆಗುಂಬೆಯ ಜಲಪಾತಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದ ವಿದ್ಯಾರ್ಥಿಗಳ ಬೈಕ್ ಅನ್ನು ತಡೆದ ಸ್ಥಳೀಯ ಹಿಂದೂ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಹಿಂದೂ ಕಾರ್ಯಕರ್ತರು ಯುವಕ-ಯುವತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ನಂತರ ಆಗುಂಬೆ ಪೊಲೀಸರು ಯುವತಿ ಹಾಗೂ ಯುವಕನ ಮನೆಯವರನ್ನು ಠಾಣೆಗೆ ಕರೆಸಿದ್ದರು. ಆದ್ರೆ, ಇಬ್ಬರ ಮನೆಯವರು ಪರಿಚಯಸ್ಥರಾಗಿದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೇ ವಾಪಸ್ ಕಳುಹಿಸಿದ್ದರು.

ಈ ವೇಳೆ ಕಾರ್ಯಕರ್ತರು ವಿದ್ಯಾರ್ಥಿ, ವಿದ್ಯಾರ್ಥಿನಿಯ ವಿಡಿಯೋವನ್ನು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಣ ಮಾಡಿದ್ದರು. ಇದೀಗ ಈ ವಿಡಿಯೋವನ್ನು ತಿಂಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದರಿಂದ ಯುವತಿಯ ಸಹೋದರ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕಾಪು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬೈಕ್‌ನಲ್ಲಿ ತೆರಳುತ್ತಿದ್ದ ಅನ್ಯ ಸಮುದಾಯದ ಹುಡುಗ-ಹುಡುಗಿಯನ್ನು ಕೆಲವರು ತಡೆದು ವಿಡಿಯೋ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಸಹೋದರನ ದೂರಿನ ಮೇರೆಗೆ ಕಲಂ 143 147 341 505(2) 354D r/w 149 IPC, ಪ್ರಕರಣ ದಾಖಲಿಸಿ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ.

Leave a Response

error: Content is protected !!