ರಾಜ್ಯ

ಕಡಬ : ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ; ಸವಾರನಿಗೆ ಗಂಭೀರ ಗಾಯ

ಕಡಬ : ಚಲಿಸುತ್ತಿದ್ದ ಬೈಕ್‌ ಮೇಲೆ ದೂಪದ ಮರವೊಂದು ಬಿದ್ದು ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಸಮೀಪ ನಡೆದಿದೆ. ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬುವವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಕೂಡಲೇ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಶವಂತ ಅವರು ಪಿಗ್ಮಿ ಕಲೆಕ್ಟರ್‌ ಆಗಿ ಕೆಲಸ ಮಾಡುತ್ತಿದ್ದು, ಅವರು ಈ ರಸ್ತೆ ಮೂಲಕ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಸಾರ್ವಜನಿಕರು ಈ ಘಟನೆ ನಡೆದಾಗ ಒಟ್ಟು ಸೇರಿದ್ದು, ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Leave a Response

error: Content is protected !!