ಕಡಬ ಸಮೀಪ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಎತ್ತಿ ಎಸೆದ ಕಾಡಾನೆ : ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು.


ಕಡಬ:ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ.
ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದ ತಲಮತ್ತಡ್ಕ ಮನೆಯ ಬಿಜು ಕುಮಾರ್ ಗಾಯಗೊಂಡು ಆಸ್ಪತ್ರೆಗೆ ಸೇರಿದವರು.
ನಡುಮನೆ ಗೇರು ನಡುತೋಪು ಸಮೀಪ ಮರಿಯಾನೆ ಹೊಂದಿರುವ ಹೆಣ್ಣು ಆನೆ 2:30 ರ ಸುಮಾರಿಗೆ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.ನಾಡು ಮನೆ ಕ್ರಾಸ್ ಸ್ಥಳದಿಂದ ಕೆಲಸದ ನಿಮಿತ್ತ ತೆರಳುತ್ತಿದ್ದ ವೇಳೆ ಕಡಾನೆ ದಾಳಿ ನಡೆಸಿದೆ.
ಗಾಯಗೊಂಡ ವ್ಯಕ್ತಿಯನ್ನು ಕಡಬ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ .
add a comment