ಕಡಬ:ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಕಡಬ:ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

:ಕಡಬ: ತಿಂಗಳ ಹಿಂದೆ ಕಡಬದ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ನ.7ರಂದು ಮೃತಪಟ್ಟಿದ್ದಾರೆ.

ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭಿರ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ರಾಜ್ಯ