

ಕಡಬ: ಬೈಕ್- ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಬಲ್ಯದ ನೆಲ್ಯಾಡಿ ರಸ್ತೆ ತಿರುವಿನಲ್ಲಿ ಗುರುವಾರ ಮುಂಜಾನೆ ನಡೆದಿದೆ
ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಬಲ್ಯ ಗ್ರಾಮದ ಕಕ್ಕೆಮಜಲು ನಿವಾಸಿ ದಿನೇಶ್ ಗಾಯಗೊಂಡ ಬೈಕ್ ಸವಾರ.
ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಹಾಗೂ ಬಲ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಲ್ಯ ಕ್ರಾಸ್ ನಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಲೋಕೋಪಯೋಗಿ ಇಲಾಖೆ ಮೂಲಕ ರಸ್ತೆಯ ತಿರುವನ್ನು ಸರಿಪಡಿಸಿ ಸಂಪರ್ಕ ರಸ್ತೆಗೆ ಹಂಪ್ಸ್ ಹಾಕಿದರೆ ವಾಹನದ ವೇಗ ತಡೆಯಬಹುದೆಮ್ದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
add a comment