

ಕಡಬ: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಮೃತ ಪಟ್ಟ ಘಟನೆ ಕಡಬ ಸಮೀಪದ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ.
ರೆಂಜಿಲಾಡಿ ಗ್ರಾಮದ ನಿಡ್ಮೇರು ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ರಶ್ಮಿತಾ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ ಎನ್ನಲಾಗಿದೆ.
ಆದರೆ ಆರೋಗ್ಯವಾಗಿದ್ದ ರಶ್ಮಿತಾ ನಿನ್ನೆ ರಾತ್ರಿ 10.30 ಕ್ಕೆ ಹಠಾತ್ ಕುಸಿದು ಬಿದ್ದು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ
add a comment