ರಾಜ್ಯ

ಕಡಬ: ಕಂಬದಲ್ಲಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ
ಪವರ್‌ಮ್ಯಾನ್ ಗಂಭೀರ.


ಕಡಬ, ಜೂ.01. ವಿದ್ಯುತ್ ಕಂಬವೇರಿದ್ದ ಲೈನ್
ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ
ಗಂಭೀರ ಗಾಯಗೊಂಡ ಘಟನೆ
ಗುರುವಾರದಂದು ಕಡಬದಲ್ಲಿ ನಡೆದಿದೆ.
ಗಾಯಾಳುವನ್ನು ಬಾಗಲಕೋಟೆ ಮೂಲದ
ದ್ಯಾಮಣ್ಣ ಎಂದು ಗುರುತಿಸಲಾಗಿದೆ. ಕಡಬದ
ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ
ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು
ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್
ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು
ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ
ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ
ಪುತ್ತೂರಿಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ
ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Response

error: Content is protected !!