ರಾಜ್ಯ

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ-ರೆಡ್ ಅಲರ್ಟ್
ಘೋಷಣೆ.


ಮಂಗಳೂರು: ಕರಾವಳಿ ಭಾಗದಲ್ಲಿ ಜು.4 ರ ಸಂಜೆಯಿಂದ ಜು.5ರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಕೆಲವು ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4 ರ ಸಂಜೆಯಿಂದ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲೆ ಮಾರುತ ಬೀಸಲಿದ್ದು ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Leave a Response

error: Content is protected !!