ಕರಾವಳಿಯ ರಾಜಕೀಯದಲ್ಲಿ ಸಂಚಲನ: ಮಹಿಳೆಯೊಂದಿಗೆ ಇರುವ ರೀತಿಯಲ್ಲಿ ಬಿಜೆಪಿ ಶಾಸಕನ ಫೋಟೋ ವೈರಲ್| ಮಹಿಳೆಯಿಂದ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು.


ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರಾವಳಿ ರಾಜಕೀಯದಲ್ಲಿ ಸಂಚಲನ ಆರಂಭವಾಗಿದೆ, ಕರಾವಳಿಯ ಬಿಜೆಪಿ ಶಾಸಕರೊಬ್ಬರು ಮಹಿಳೆಯೊಬ್ಬರ ಜೊತೆಗೆ ಆತ್ಮೀಯವಾಗಿರುವ ರೀತಿಯಲ್ಲಿನ ಪೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು :ಈ ಬಗ್ಗೆ ಸಂತ್ರಸ್ತ ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಕೆ ಎ.೫ ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಪೋಟೊ ಅಸಲಿ/ ಎಡಿಟೆಡ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸ್ ತನಿಖೆ ನಡೆಯಲಿದೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೊಗಳು ರಾಜಕೀಯ ವಲಯದಲ್ಲೂ ತಲ್ಲಣ ಮೂಡಿಸಿದೆ. ಮುಂಬರುವ ವಿಧಾನ ಸಭಾ ಚುನಾವಣೆಯ ಮೇಲೆ ಈ ಫೋಟೊಗಳು ಪರಿಣಾಮ ಬೀರುವ ಸಾಧ್ಯತೆಯಿದೆ.
add a comment