

ಮುಲ್ಕಿ: ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಕಿಚ್ಚ ಸುದೀಪ್ ಡಿ.4ರಂದು ಬೆಳಗ್ಗೆ ಭೇಟಿ ನೀಡಿದ್ದಾರೆ.

ಪತ್ನಿ ಪ್ರಿಯಾ ಜೊತೆ ಆಗಮಿಸಿದ ಸುದೀಪ್ ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ಸುದೀಪ್ ದೇವಳಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ, ಈ ಸಂದರ್ಭದಲ್ಲಿ ದೇವಳದ ಸಮಿತಿಯವರು ಕಟೀಲು ದುರ್ಗಾಪರಮೇಶ್ವರಿ ದೇವಿ ಪೋಟೊವನ್ನು ನೆನಪಿನ ಕಾಣಿಕೆಯಾಗಿ ನೀಡಿದರು.
add a comment