
ಕಣ್ಣೂರು ಜೂನ್ 01: ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಕೋಚ್‌ನಲ್ಲಿ ಗುರುವಾರ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಎರಡು ತಿಂಗಳ ಅವಧಿಯಲ್ಲಿ ರೈಲಿಗೆ ಬೆಂಕಿ ಹಚ್ಚಿದ ಎರಡನೇ ಘಟನೆ ಇದಾಗಿದೆ.


ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹಚ್ಚಲಾಗಿದೆ. ಹೀಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಧ್ಯರಾತ್ರಿ 12.45 ರ ಸುಮಾರಿಗೆ ಕೋಚ್ ಬಳಿ ವ್ಯಕ್ತಿಯೊಬ್ಬ ಕ್ಯಾನ್ ಹೊತ್ತೊಯ್ಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ. ಏಪ್ರಿಲ್ 2 ರಂದು ರಾತ್ರಿ ಕೋಝಿಕ್ಕೋಡ್ ರೈಲು ನಿಲ್ದಾಣದಿಂದ ಕಣ್ಣೂರು ಕಡೆಗೆ ಹೋಗುತ್ತಿದ್ದಾಗ ಯುವಕನೊಬ್ಬ ಅದೇ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಕೋಝಿಕೋಡ್ ಜಿಲ್ಲೆಯಲ್ಲಿ ರೈಲಿಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಒಂದು ಮಗು ಸೇರಿದಂತೆ ಮೂವರು ಸಾವನ್ನಪ್ಪಿದರು ಮತ್ತು ಸುಮಾರು ಹತ್ತು ಮಂದಿ ಗಾಯಗೊಂಡಿದ್ದರು. ಘಟನೆಯನ್ನು ಭಯೋತ್ಪಾದಕ ಕೃತ್ಯ ಎಂದು ಶಂಕಿಸಲಾಗಿದ್ದು, ಎನ್‌ಐಎ ತನಿಖೆಯನ್ನು ವಹಿಸಿಕೊಂಡಿದೆ. ಈ ಸಂಬಂಧ ದೆಹಲಿಯ ಶಾಹೀನ್ ಬಾಗ್ ಮೂಲದ ಶಾರುಖ್ ಸೈಫಿಯನ್ನು ಬಂಧಿಸಲಾಗಿದೆ