ರಾಜ್ಯ

ಕುದ್ಮಾರು : ಗಂಡ –ಹೆಂಡತಿ ಜಗಳ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಪತ್ನಿ ಸಾವು, ಪತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ.

ಗಂಡ –ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಸುಮ ಮತ್ತು ಆಕೆಯ ಪತಿ ಸಂಜೀವ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು.
ಅಂತೆಯೇ ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ ಇಬ್ಬರು ಕೂಡ ವಿಷ ಸೇವಿಸಿದ್ದಾರೆ. ಈ ವಿಚಾರ ಸ್ಥಳೀಯರಿಗೆ ತಿಳಿದು ತಕ್ಷಣ ಅವರ ಸಂಬಂಧಿಕರಿಗೆ ವಿಚಾರವನ್ನು ತಿಳಿಸಿರುತ್ತಾರೆ. ಅವರು ಬಂದು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನದಲ್ಲಿದ್ದಾಗ ಕುಸುಮ ತನ್ನ ಪ್ರಾಣವನ್ನು ಕಳೆದುಕೊಂಡಿರುತ್ತಾರೆ. ಸಂಜೀವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Response

error: Content is protected !!