

ಸುಬ್ರಹ್ಮಣ್ಯ:ಕಡಬ ತಾಲೂಕಿನ ಪ್ರಸಿದ್ದ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ಈ ನಡುವೆ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದೆ.
ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರು ಬ್ಯಾನರ್ ಅಳವಡಿಸಿರುವ ಬಗ್ಗೆ ಮಾಹಿತಿ ಇಲ್ಲ, ಕೆಲಸದ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದು ಪರಿಶೀಲನೆ ಮಾಡಲಾಗುವುದು ಎಂದಿದ್ದಾರೆ.

add a comment