
ಕುಂದಾಪುರ, ಜ.28: ಕಾಲೇಜಿಗೆ ತೆರಳುತ್ತಿದ್ದ
ವಿದ್ಯಾರ್ಥಿಯೋರ್ವ ಬಸ್ಸಿನಿಂದ ರಸ್ತೆಗೆ ಬಿದ್ದು, ಬಸ್
ಚಕ್ರದಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ಹೆಮ್ಮಾಡಿಯ ಜಂಕ್ಷನ್ ನಲ್ಲಿ ನಡೆದಿದೆ.
ಹೆಮ್ಮಾಡಿ ಸಮೀಪದ ಕಟ್ ಬೇಲ್ಲೂರು ನಿವಾಸಿ,
ಕೋಟೇಶ್ವರ ಕಾಗೇರಿಯ ವರದರಾಜ ಎಂ. ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ ಪೂಜಾರಿ (20) ಮೃತಪಟ್ಟ ಯುವಕ.ಶನಿವಾರ ಬೆಳಗ್ಗೆ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಪ್ರಯಾಣಿಸುತ್ತಿದ್ದರು. ಇವರು ಹೆಮ್ಮಾಡಿ ಜಂಕ್ಷನ್ ಹಿಂದಿನ ನಿಲ್ದಾಣವಾದ ಕಟ್ ಬೇಲ್ಲೂರಿನಲ್ಲಿ ಬಸ್ ಹತ್ತಿದ್ದರು. ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಗಿದ್ದು, ಬಸ್ ಮುಂದಕ್ಕೆ
ಚಲಿಸುತ್ತಿದ್ದಂತೆ ಮಹಿಳೆಯೊಬ್ಬರು ಇಳಿಯಲು
ಬಾಕಿಯಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ
ಚಾಲಕ ಬಸ್ ನಿಲ್ಲಿಸುತ್ತಿದ್ದಂತೆ ಮುಂಬಾಗಿಲ ಬಳಿ ನಿಂತಿದ್ದ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ
ಬಿದ್ದಿದ್ದಾರೆನ್ನಲಾಗಿದೆ. ಅವರ ಮೇಲೆಯೇ ಬಸ್ ಮುಂದಿನ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸುದೀಪ್ ಮೃತಪಟ್ಟಿದ್ದಾರೆ. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಸಲಾಗಿದೆ.

