ರಾಜ್ಯ

ಕುಶಾಲನಗರ ಬೆಂಕಿ ಅವಘಡ : ಸುಟ್ಟು ಕರಕಲಾದ ಲಾರಿ.

ಮಾ.23 : ಅಗ್ನಿ ಆಕಸ್ಮಿಕದಿಂದ ಲಾರಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಗುಜುರಿ ತುಂಬಿದ ಲಾರಿ ಮಂಗಳೂರಿಗೆ ಕೊಯಮತ್ತೂರಿನಿಂದ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತಾಂತ್ರಿಕ ದೋಷದಿಂದ ನಿಲುಗಡೆಗೊಳಿಗೊಳಿಸಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತ್ತಾದರೂ ಅಷ್ಟೊತ್ತಿಗಾಗಲೇ ಲಾರಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು.

Leave a Response

error: Content is protected !!