ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ: ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 10ನೇ ವರ್ಷದ ಪುಣ್ಯ ತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆ.7 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ತತ್ವ ಆದರ್ಶಗಳನ್ನು ತಿಳಿಸಿ ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಡಾ. ಕುರುಂಜಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Leave a Response

error: Content is protected !!