ರಾಜ್ಯ

ಮಾಕುಟ್ಟದಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆ..! ವ್ಯಕ್ತಿಯ ಕೊಲೆ ಮಾಡಿ ಶವವನ್ನು ಟ್ರಾಲಿ ಬ್ಯಾಗ್ ನಲ್ಲಿ ತುಂಬಿಸಿ ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ.

ಅಪರಿಚಿತ ವ್ಯಕ್ತಿಯ ಮೃತ ದೇಹ ಕೊಡಗು-ಕೇರಳ ಗಡಿಭಾಗದ ಮಾಕುಟ್ಟ ಚಕ್ ಪೊಸ್ಟ್ ಬಳಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಮಾಕುಟ್ಟ ಬಳಿ ಕೊಳೆತ ಸ್ಥಿತಿಯಲ್ಲಿ‌ ಮೃತದೇಹ ಪತ್ತೆಯಾಗಿದ್ದು, ಕೊಲೆಮಾಡಿ ಟ್ರಾಲಿ ಬ್ಯಾಗ್ ನಲ್ಲಿ ಎಸೆದು ಹೊಗಿರುವ ಶಂಕೆ ವ್ಯಕ್ತವಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಇದೀಗ ಸ್ಥಳಕ್ಕೆ ಪೋಲಿಸರು ದಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Response

error: Content is protected !!