
ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಯದಿಂದ ಪಾರಾದ ಘಟನೆ ಮಡಿಕೇರಿ ಮೈಸೂರು ರಸ್ತೆಯ ಚೈನ್ ಗೇಟ್ ಬಳಿ ನಡೆದಿದೆ.
ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಚಾಲಕ ಹಾಗೂ ಜೊತೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ, ಸ್ಥಳಕ್ಕೆ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




