ರಾಜ್ಯ

ಕೃಷ್ಣ ಮೃಗದ ಚರ್ಮ ಮಾರಾಟ ಯತ್ನ : ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದಿಂದ ಇಬ್ಬರು ಆರೋಪಿಗಳ ಬಂಧನ

ಮಡಿಕೇರಿ ನ.30 : ಕೃಷ್ಣ ಮೃಗದ ಚರ್ಮವನ್ನು
ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ
ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಚಿತ್ರದುರ್ಗದ ನಿವಾಸಿಗಳಾದ ನರಸಿಂಹ ಮೂರ್ತಿ ಹಾಗೂ ನಾಗರಾಜು ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ನ.30ರಂದು ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಕೃಷ್ಣ ಮೃಗದ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ
ನಡೆಸಿದರು.ಆರೋಪಿಗಳಿಂದ 1 ಕೃಷ್ಣ ಮೃಗದ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ. ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್
ಮಹಾನಿರ್ದೇಶಕ ಕೆ.ವಿ.ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅದೀಕ್ಷಕ ಕೆ.ಬಿ.ವಿಶ್ವನಾಥ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ
ಸಿ.ಯು.ಸವಿ, ಸಿಬ್ಬಂದಿಗಳಾದ ಶೇಖರ್,
ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ
ಹಾಗೂ ಮಂಜುನಾಥ ಪಾಲ್ಗೊಂಡಿದ್ದರು.

Leave a Response

error: Content is protected !!