
ಬೆಳ್ತಂಗಡಿ, ಎಪ್ರಿಲ್ 12: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ ದೇವರ ದರ್ಶನ ಪಡೆದು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.



ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಬಳಿಯ ಹೆಲಿಪ್ಯಾಡ್ ನಲ್ಲಿ ಇಳಿದು ದೇವಸ್ಥಾನಕ್ಕೆ ಆಗಮಸಿದ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಸಮೇತರಾಗಿ ಹೆಗ್ಗಡೆಯವರ ನಿವಾಸಕ್ಕೆ ಆಗಮಿಸಿ ಶ್ರೀ ದೇವರ ದರ್ಶನಕ್ಕೆ ಪಡೆದಿದ್ದಾರೆ.
ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬೇರೆ ಪ್ರವಾಸದಲ್ಲಿರೋ ಹಿನ್ನೆಲೆ ಹೆಗ್ಗಡೆ ಸಹೋದರ ಹರ್ಷೇಂದ್ರ ಕುಮಾರ್ ಭೇಟಿಯಾಗಿದ್ದಾರೆ. ಮೊದಲ ಹಂತದ ಟಿಕೆಟ್ ಘೋಷಣೆ ಬೆನ್ನಲ್ಲೇ ಸಿಎಂ ಇಂದು ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ