ರಾಜ್ಯ

ಮಂಗಳೂರು: 3.2 ಕೋಟಿ ಮೌಲ್ಯದ
ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ:
ಇಬ್ಬರು ಪೊಲೀಸ್ ವಶಕ್ಕೆ.

ಮಂಗಳೂರು: ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸ್ ನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿಮಿತ್(26), ಪುಂಜಾಲಕಟ್ಟೆಯ ಯೋಗೀಶ್ (41) ಬಂಧಿತ ಆರೋಪಿಗಳುಮಂಗಳೂರು ನಗರದ ಲಾಲ್ ಭಾಗ್ ಕರಾವಳಿ ಮೈದಾನ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ನ್ನು ವಶದಲ್ಲಿಟ್ಟು
ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನ ಬಂಧಿಸಿದ್ದಾರೆ ಆರೋಪಿಗಳಿಂದ ಅಪರೂಪದ ಹಾಗೂ ಕೋಟ್ಯಾಂತರ ರೂಪಾಯಿ ಬೆಲೆಬಾಳುವ 3.2 ಕೆಜಿ ತೂಕದ ಅಂಬರ್ ಗ್ರೀಸ್ ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಇದಕ್ಕೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 3.2 ಕೋಟಿ ಮೌಲ್ಯವಿರುತ್ತದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಈ ಅಪರೂಪದ ಬೆಲೆಬಾಳುವ ಅಂಬರ್ ಗ್ರೀಸ್ ಹಾಗೂ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ
ಪಿಎಸ್‌ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Leave a Response

error: Content is protected !!