ರಾಜ್ಯ

ಮಂಗಳೂರು – ವರ್ಲ್ಡ್ ಕಪ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಿದ್ದ ಇಬ್ಬರು ಅರೆಸ್ಟ್.

ಮಂಗಳೂರು : ಕ್ರಿಕೆಟ್ ವರ್ಲ್ಡ್ ಕಪ್ ಹಂಗಾಮ ಪ್ರಾರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಬೆಟ್ಟಿಂಗ್ ದಂಧೆಯೂ ನಡೆಯುತ್ತಿದೆ. ಇದೇ ರೀತಿಯ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನಿ ನಿರತವಾಗಿದ್ದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ದೀಪಕ್(33) ಮತ್ತು ಸಂದೀಪ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಕ್ರಿಕೆಟ್ ವಿಶ್ವಕಪ್ ಪಂದ್ಯದ ವೇಳೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ. ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ

Leave a Response

error: Content is protected !!