ರಾಜ್ಯ

ಮಂಗಳೂರು ನಗರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ  ಆರೋಪಿ ಸೆರೆ.

ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್‌ ಸಹಿತ ಒಟ್ಟು 1,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿಯ ಕುಕ್ಕೇಡಿಯ ಗೋಳಿಯಂಗಡಿ ನಿವಾಸಿ ಅಬುತಾಹಿರ್ ಯಾನೆ ಅನ್ವರ್ (25) ಬಂಧಿತ ಆರೋಪಿ. ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್‌ನಲ್ಲಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.

ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ನರೇಂದ್ರ, ಎಎಸ್‌ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು

Leave a Response

error: Content is protected !!