ರಾಜ್ಯ

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಅಧಿಕಾರ ಸ್ವೀಕಾರ..!ಅನೈತಿಕ ಪೊಲೀಸ್‌ಗಿರಿ ಕೃತ್ಯಗಳಿಗೆ ಬೆಂಬಲ ಕೊಡುವವರಿಗೂ ಕಾನೂನು ತಂದು ಕ್ರಮದ ಎಚ್ಚರಿಕೆ.

ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಇಂದು (ಗುರುವಾರ) ಅಧಿಕಾರ ಸ್ವೀಕಾರ ಮಾಡಿದರು.

ಡಿಸಿಪಿಗಳಾದ ದಿನೇಶ್ ಕುಮಾರ್, ಸಿದ್ಧಾರ್ಥ್ ಗೋಯಲ್ ಈ ಸಂದರ್ಭ ಉಪಸ್ಥಿತರಿದ್ದರು. ನಿರ್ಗಮನ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್. ಜೈನ್ ಅವರಿಂದ ಅಧಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿಯೇ ಮಂಗಳೂರು ಅತ್ಯಂತ ಮಹತ್ವ ಹಾಗೂ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿದೆ.
ಹಾಗಾಗಿ ಇಲ್ಲಿ ಕೆಲಸ ಮಾಡುವಾಗ ನಮ್ಮ ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ.
ಬೀಟ್ ವ್ಯವಸ್ಥೆಯೊಂದಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲಾಗುವುದು.ಮತ್ತು ಜನಪ್ರಿಯ ಫೋನ್ ಇನ್ ಕಾರ್ಯಕ್ರಮ ಸಮಸ್ಯೆಗಳ ಸ್ಪಂದನೆಗೆ ಉತ್ತಮ ವೇದಿಕೆಯಾಗಿದ್ದು ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸುವುದಾಗಿ ಭರವಸೆ ನೀಡಿದರು.


ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಸಂದರ್ಭ ಇಲ್ಲಿನ ಡ್ರಗ್ಸ್ ಸಮಸ್ಯೆಯ ಬಗ್ಗೆ ಕೇಳಿದ್ದೇನೆ.
ಹಿಂದಿನ ಕಮಿಷನರ್ ಕುಲದೀಪ್ ಕುಮಾರ್ ಅವರು ಕೂಡಾ ಈ ದಿಸೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ.
ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನ ಯಶಸ್ವಿ ಕಾಣುತ್ತಿದ್ದು, ನಶೆ ಮುಕ್ತ ಮಂಗಳೂರು ಕನಸು ನನಸು ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಈ ಅಭಿಯಾನವನ್ನು ಮುಂದುವರಿಸುತ್ತೇನೆ ಎಂದರು.
ರಾಜ್ಯ ಪೊಲೀಸರಿಗೆ ಮತ್ತೊಂದು ಪ್ರಮುಖ ಸೂಕ್ಷ್ಮ ವಿಚಾರ ಅಂದ್ರೆ ಅನೈತಿಕ ಪೊಲೀಸ್‌ಗಿರಿ. ಈ ಭಾಗದಲ್ಲಿ ಸಮಸ್ಯೆ ಹೆಚ್ಚಿರುವ ಬಗ್ಗೆ ಅರಿವಿದೆ.
ಪೊಲೀಸರು ಈಗಾಗಲೇ ಈ ಬಗ್ಗೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅನೈತಿಕ ಪೊಲೀಸ್‌ಗಿರಿಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮಗಳ ಮೂಲಕ ಕಾನೂನಿನ ನೈಜ ಮುಖವನ್ನು ತೋರಿಸಲಿದ್ದೇವೆ ಎಂದರು.ಅನೈತಿಕ ಪೊಲೀಸ್‌ಗಿರಿ ಕೃತ್ಯಗಳಿಗೆ ಬೆಂಬಲ ಕೊಡುವವರನ್ನೂ ಕಾನೂನಡಿ ತಂದು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು

Leave a Response

error: Content is protected !!