ವೈದ್ಯರ ಕಾರು ತಡೆದು ಪೊಲೀಸ್ ಗಿರಿ-ಐವರ ಬಂಧನ.

ವೈದ್ಯರ ಕಾರು ತಡೆದು ಪೊಲೀಸ್ ಗಿರಿ-ಐವರ ಬಂಧನ.

ಮಂಗಳೂರಿನ‌ ಹೆಸರಾಂತ ಕಾಲೇಜುವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು.

ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಇವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ್ದರು.

ಈ ಕುರಿತು 112ಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಘಟನಾ ಸ್ಥಳಕ್ಕೆ ತೆರಳಿದ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ ನೇತೃತ್ವದ ಪೊಲೀಸ್ ತಂಡ ಸಂತೋಷ್ ನಂದಳಿಕೆ,ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ತೆಳ್ಳಾರು ಎಂಬವರನು ಬಂಧಿಸಿದ್ದಾರೆ‌.

ರಾಜ್ಯ