ರಾಜ್ಯ

ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

ಮಂಗಳೂರು : ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ ಮಾತನಾಡುತ್ತಿರುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ.

ಮೃತರನ್ನು ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಎಂದು ಗುರುತಿಸಲಾಗಿದೆ. ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಇಂದು ಸಂಜೆ ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟುತ್ತಿದ್ದರಂತೆ. ಈ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ನುರಿತ ಈಜುಗಾರರಾದ ಶಶೀಂದ್ರ ಅವರು ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ ಮೂರಡಿಯಷ್ಟು ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರೇ ಮೃತದೇಹವನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Leave a Response

error: Content is protected !!