ಮಂಗಳೂರು: ನಗರಯ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೋಪಿಯ ಪತ್ತೆಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಸೈ ಗಂಗಾಧರ ಎನ್, ಎಚ್.ಸಿ ಚಂದ್ರಹಾಸ್ ಸನೀಲ್, ಎಚ್ಸಿ ಪುರುಷೊತ್ತಮ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಬುಧವಾರ ಸಕಲೇಶಪುರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
add a comment