ರಾಜ್ಯ

ಮಂಗಳೂರು : ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಮಂಗಳೂರು: ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಮಣ್ಣಗುಡ್ಡೆ ದುರ್ಗಾ ಮಹಲ್‌ ಬಳಿ ಅಮಲಿನಲ್ಲಿದ್ದ ಕುಂಜತ್ತಬೈಲು ನಿವಾಸಿ ನತಾಶ್‌ (23)ನನ್ನು ಬರ್ಕೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಆತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ತಪಾಸಣೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಬರ್ಕೆ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಗರದ ತಾರೆತೋಟದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಸೋಹನ್‌ (23)ನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆತನ ವಿರುದ್ಧ ಕಂಕನಾಡಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Response

error: Content is protected !!