ರಾಜ್ಯ

ಮೇ14 ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಸಮಾಪನಾ ಸಮಾರಂಭ :
” ಶ್ರೀ ಕೇಶವ ಸ್ಮೃತಿ” ಪ್ರಶಸ್ತಿ ಪ್ರದಾನ ಸಮಾರಂಭ

ಸುಳ್ಯ ಹಳೆಗೇಟಿನ ವಿದ್ಯಾನಗರ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ ಸಮಾಪನಾ ಸಮಾರಂಭ ಹಾಗೂ ಶ್ರೀಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 14ರಂದು ಅಪರಾಹ್ನ ಗಂಟೆ 3ರಿಂದ ಶ್ರೀ ಕೇಶವಕಿರಣ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬ್ರಹ್ಮಶ್ರೀ ವೇದ ಮೂರ್ತಿ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.


ಮೇ 6 ರಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ಕಳೆದ 23 ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿರುವ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ 2023ನೇ ಸಾಲಿನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು. ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ.ಎಸ್.ನಾಗರಾಜ ರಾವ್ ಅಧ್ಯಕ್ಷತೆ ವಹಿಸಲಿರವರು. ಮಂಗಳೂರು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್ ಸನ್ಮಾನ ನೆರವೇರಿಸುವರು. ಬೆಳಾಲು ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೂಂತಾರು ಅಭಿನಂದನಾ ಭಾಷಣ ಮಾಡುವರು. ಪ್ರತಿಷ್ಠಾನದ ಗೌರವಾಧ್ಯಕ್ಷ ಎಂ.ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿರಲಿದ್ದಾರೆ. ಬ್ರಹ್ಮ ಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ (ರಿ.) ಇಡ್ಕಿದು, ಭಾರತ ಸೇವಾದಳ ಯೋಗ ಸಂಪನ್ಮೂಲ ವ್ಯಕ್ತಿ ಆರ್.ಬಿ.ಭಂಡಾರಿ ಬೆಂಗಳೂರು, ಕಂಚಿ ಕಾಮಕೋಟಿ ಪೀಠ ಆಸ್ಥಾನದ ವಿದ್ವಾಂಸ, ವಯಲಿನ್ ಕಲಾವಿದ ವಿದ್ವಾನ್ ರಾಜೇಶ್ ಕುಂಭಕ್ಕೋಡು ಅವರಿಗೆ “ಶ್ರೀ ಕೃಶವ ಸ್ಮೃತಿ 2023 ಪ್ರಶಸ್ತಿ” ಪ್ರದಾನ ಮಾಡಲಾವುದು.ಮೇ 8ರಂದು ಕ್ರೀಡೋತ್ಸವ ನಡೆಯಲಿದೆ , ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ಕೇಂದ್ರ ಸರಕಾರದಿಂದ ನಡೆಸಲಾದ ವೇದ ಪಾಠ, ಕಲಾ ಪಾಠಗಳಲ್ಲಿ ಶಿಭಿರದ ವಿದ್ಯಾರ್ಥಿಗಳು ಭಾಗವಹಿಸಿದ್ದು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಪ್ರಧಾನ ಮಾಡಲಾಗುವುದು ಎಂದು ಹೇಳಿದರು
ಶಿಬಿರಾಧಿಕಾರಿ ಅಕ್ಷತಾ, ಶಿಬಿರದ ಸಂಚಾಲಕ ಅಭಿರಾಮ ಶರ್ಮಾ ಸರಳಿಕುಂಜ, ಸುದರ್ಶನ ಭಟ್ ಉಜಿರೆ, ಬಲರಾಮ ಭಟ್ ಉಪಸ್ಥಿತರಿದ್ದರು
.

Leave a Response

error: Content is protected !!