ರಾಜ್ಯ

ಮಿತ್ತೂರಿನ ಕಮ್ಯುನಿಟಿ ಹಾಲ್ ಸೀಝ್..! ಕಮ್ಯೂನಿಟಿ
ಹಾಲ್‌ಗೆ ಬೀಗ ಜಡಿದ ಎನ್‌ಐಎ.!.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ
ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ
ಎನ್‌ಐಎ ತಂಡ ಮಿತ್ತೂರಿನ ಕಮ್ಯುನಿಟಿ ಹಾಲ್‌ನ್ನು
ತನ್ನ ಸುಪರ್ದಿಗೆ ತೆಗೆದುಕೊಂಡಿದೆ.
ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರ
ಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್‌ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್‌ಐಎ ಸಂಪೂರ್ಣ ತನ್ನ ಹಿಡಿತಕ್ಕೆತೆಗೆದುಕೊಂಡಿದೆ. ಈ ವಿಚಾರವಾಗಿ ಆದೇಶದ ಪ್ರತಿಯನ್ನು ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೋಲೀಸ್ ವರಿಷ್ಟಾಧಿಕಾರಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಎನ್‌ಐಎ ವಶದಲ್ಲಿರುವ ಜಾಗವನ್ನು ಪರಭಾರೆ ಮಾಡುವಂತಿಲ್ಲ. ಬಾಡಿಗೆ, ಭೋಗ್ಯಕ್ಕೆ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ವಸ್ತುಗಳನ್ನು ಸಾಗಿಸುವುದು ಅಥವಾ ನವೀಕರಿಸುವುದನ್ನು ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Response

error: Content is protected !!