ರಾಜ್ಯ

ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗ: ನಾಳೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ ಸಾಧ್ಯತೆ.

ಬೆಂಗಳೂರು, ಮೇ 14: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ ಹಿನ್ನೆಲೆ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ.

ರಾಜೀನಾಮೆ ನೀಡೋ ಬಗ್ಗೆ ಕಟೀಲ್ ಈಗಾಗಲೇ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. 2019 ರ ಆಗಸ್ಟ್ 20 ರಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರ ಸ್ಥಾನಕ್ಕೆ ಕಟೀಲ್‌ರನ್ನು ಕರ್ನಾಟಕ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಹಿನ್ನೆಲೆಯಲ್ಲಿ ಸೋಮವಾರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕಟೀಲ್ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ

Leave a Response

error: Content is protected !!