

ನೆಲ್ಯಾಡಿ, ನ.01. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮ ಪಂಚಾಯತ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಉತ್ತರ ಪ್ರದೇಶ ನಿವಾಸಿ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿ ಪರಿಸರದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸುರೇಂದ್ರ ಮೆಹ್ತಾ (37) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಕೌಕ್ರಾಡಿ ಗ್ರಾಮ ಪಂಚಾಯತಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರ್ಮಿಕ ಸುರೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇವರು ನ.1ರಂದು ಸಂಜೆ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಇಕೊಮೆಟ್ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೌಕ್ರಾಡಿ ಗ್ರಾ.ಪಂ.ನ ಮುಂಭಾಗ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಸುರೇಂದ್ರ ಮೆಹತೋ ಅವರನ್ನು ತಕ್ಷಣ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಮೃತಪಟ್ಟರು ಎಂದು ವರದಿಯಾಗಿದೆ