
ಪ್ರಧಾನಿ ಮೋದಿಯವರ ಸ್ವಚ್ಛ ಭಾರತ್ ಕಲ್ಪನೆಯಂತೆ, ಗಾಂದೀ ಜಯಂತಿ ಅಂಗವಾಗಿ ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ವತಿಯಿಂದ ಸ್ವಚ್ಚತಾ ಅಭಿಯಾನವನ್ನು ಹಮ್ಮಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಭುವನ್ ಕುಂಬಳಚೇರಿ, ಉಪಾಧ್ಯಕ್ಷ ಪ್ರದೀಪ್ ಕುಂಬಳಚೇರಿ, ಕಾರ್ಯದರ್ಶಿ ಜೀವನ್ ಮಜಿಕೋಡಿ, ಖಜಾಂಜಿ ಪ್ರವೀಣ್ ಮಜಿಕೋಡಿ, ಪಂಚಾಯತ್ ಸದಸ್ಯ ಉದಯಚಂದ್ರ ಕುಂಬಳಚೇರಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮಹದೇವ ಪ್ರಭು, ಪಂಚಾಯತ್ ಕಾರ್ಯದರ್ಶಿ ಹಾಗೂ ಸಿಬ್ಬಂದಿ ನಾಗೇಶ್ ಕುಂಡಾಡು ಮತ್ತು ಚಿಗುರು ಯುವಕ ಮಂಡಲದ ಸದಸ್ಯರು ಪಾಲ್ಗೊಂಡಿದ್ದರು.

