ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ.

ಕೃಷಿ ಇಲಾಖೆ, ಮಡಿಕೇರಿ ಕೊಡಗು ಜಿಲ್ಲೆ ಇದರ ಸಹಯೋಗದಲ್ಲಿ ರೈತ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರಿಗೆ ಮಾಹಿತಿ. ಕಾರ್ಯಗಾರವನ್ನು ಅ.27 ರಂದು ಸಂಘದ ನೂತನ ರೈತ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಯ್ತು. ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಯೋಜನೆ ಬಗ್ಗೆ ನೀರಜ, ಸಂಪನ್ಮೂಲ ವ್ಯಕ್ತಿಗಳು, PMFME ಯೋಜನೆ, ಕೃಷಿ ಇಲಾಖೆ ಮಡಿಕೇರಿ ಇವರು ಮಾಹಿತಿಯನ್ನು ನೀಡಿದರು. ಆಡು ಮತ್ತು ಹಂದಿ ಸಾಕಾಣಿಕೆ ಬಗ್ಗೆ ಡಾ. ಸುರೇಶ್, ವಿಷಯ ತಜ್ಞರು, ಕೆವಿಕೆ ಗೋಣಿಕೊಪ್ಪ ಇವರು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಬಿ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ ಬಳ್ಳಡ್ಕ ಇವರು ನೆರವೇರಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಅಶೋಕ ಪಿ ಎಂ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ ಯವರು ಉಪಸ್ಥಿತರಿದ್ದರು. ಸಂಘದ ನಿರ್ದೇಶಕರು, ಗ್ರಾಮ ಪಂಚಾಯತ್ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು, ರೈತ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜ್ಯ