ಸುಳಿವು ಸಿಗದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಜಾಡು : ಜೂ. 30 ರೊಳಗೆ ಆರೋಪಿಗಳ ಶರಣಾಗತಿಗೆ ಎನ್‌.ಐ.ಎ ವಾರ್ನಿಂಗ್

ಸುಳಿವು ಸಿಗದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಜಾಡು : ಜೂ. 30 ರೊಳಗೆ ಆರೋಪಿಗಳ ಶರಣಾಗತಿಗೆ ಎನ್‌.ಐ.ಎ ವಾರ್ನಿಂಗ್

ಬೆಳ್ಳಾರೆ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ತೀವ್ರ ವಿಚಾರಣೆ ನಡೆಸುತ್ತಿರು ಎನ್ ಐ ಏ ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದು, ಇಂದು ನಗರದ ಭೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಮುಟ್ಟುಗೋಲು ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿದ್ದಾರೆ. ಎನ್‌ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಯವರು ಜಂಟಿಯಾಗಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ.


ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದಾರೆಂದು ತಿಳಿದುಬಂದಿದೆ. ಎನ್. ಐ. ಏ ಅಧಿಕಾರಿಗಳು ಈ ಹಿಂದೆ ಆರೋಪಿಗಳ ಪೋಟೊಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿ ಆರೋಪಿಗಳ ಪತ್ತೆಗೆ ಸಾಕಷ್ಟು ಪ್ರಯತ್ನ ಪಟ್ಟಿತ್ತು, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ನಡೆದು 11 ತಿಂಗಳು ಕಳೆದುಹೋಗಿದ್ದು ಎನ್ ಐ ಎ ಅಧಿಕಾರಿಗಳ ಮುಂದಿನ ನಡೆ ಕುತೂಹಲ ಮೂಡಿಸಿದೆ.

ರಾಜ್ಯ