

ದಿ.ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆಯನ್ನು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ
ನಳಿನ್ ಕುಮಾರ್ ಕಟೀಲು ಹಾಗು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಜಂಟಿಯಾಗಿ ನೆರವೇರಿಸಿದರು. ಈ ಸಂಧರ್ಭದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ,ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಪ್ರಮುಖರಾದ ಇಂದಿರಾ ಬಿ.ಕೆ.,ಜಗದೀಶ್ ಅಧಿಕಾರಿ ಸೇರಿದಂತೆ ಪ್ರಮುಖರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

add a comment