ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಅಳವಡಿಸಿದ ಪ್ರಕರಣ: ಆರೋಪಿಗಳಿಗೆ ಪೋಲಿಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ: ಗಾಯಗಳ ಪೋಟೊ ವೈರಲ್


ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದ,ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿ ತೀವ್ರ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ, ಬೆನ್ನು, ಸೊಂಟದ ಬಾಗದಲ್ಲಿ ಹಲ್ಲೆಯಿಂದ ರಕ್ತ ಒಸರುವ ಪೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು , ಥಳಿಸಿ ಪೊಲೀಸರ ಕಿರುಕುಳದಿಂದ ಕಾರ್ಯಕರ್ತರು ಎದ್ದು ನಡೆಯಲಾಗದ ಸ್ಥಿತಿಯಲ್ಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ವಿಷಯ ತಿಳಿದು ಅರುಣ್ ಪುತ್ತಿಲ ಕಾರ್ಯಕರ್ತರನ್ನು ಅವರ ಕೈಯಿಂದ ಬಿಡಿಸಿ ತಂದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ,

add a comment