ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನ ಬರ್ಬರ ಹತ್ಯೆ

ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನ ಬರ್ಬರ ಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹುಲಿವೇಷ ತಂಡಗಳಲ್ಲಿ ಒಂದಾದ ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನನ್ನು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ.
ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ ಮಾಡಲಾಗಿದ್ದು, ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ ಆಗಮಿಸಿದ ತಂಡಯೊಂದು ಈ ಕೃತ್ಯ ಎಸಗಿದೆ.
ಹತ್ಯೆಯ ಆರೋಪಿಗಳಾದ ಮನೀಷ್ ಮತ್ತು ಚೇತು ಪೊಲೀಸ್ ಠಾಣೆಗೆ ಶರಣಾಗಿದ್ದು, ಮತ್ತೋರ್ವ ಆರೋಪಿ ತಲೆಮಲೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಗಲಾಟೆ ನಡೆದಿದ್ದು ಈ ಕೊಲೆಯಲ್ಲಿ ಅಂತ್ಯ ಕಂಡಿದೆ ಎಂದು ತಿಳಿದು ಬಂದಿದೆ.

ರಾಜ್ಯ