ಪುತ್ತೂರು: ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನು
ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ
ಕಟ್ಟಡವೊಂದರಲ್ಲಿ ನಡೆದಿದೆ.ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು
ನವರಾದ ನಿಂಗನ ಗೌಡ, ಒಡಹುಟ್ಟಿದ ತಮ್ಮನಾದ
ಮಾದೇವಪ್ಪನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು
ಬಂದಿದೆ.ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಪುತ್ತೂರು ನಗರ ಠಾಣಾ ಅ.ಕ್ರ.97/2022 ಕಲಂ 302
IPC ರ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ
ದಾಖಲಾಗಿದೆ.ಘಟನೆಯ ಬಳಿಕ ಆರೋಪಿ ನಿಂಗನ ಗೌಡ ತಲೆಮರಿಸಿಕೊಂಡಿದ್ದು ಪೋಲಿಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
add a comment