ರಾಜ್ಯ

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆ ಶುಭಾರಂಭ

ಪುತ್ತೂರು: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 8ನೇ ಶಾಖೆ ಡಿ.12 ರಂದು ಕಾಣಿಯೂರಿನ ರಾಶಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ.

ಅವರು ಬುಧವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2002 ರಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದ ಕಟ್ಟಡದಲ್ಲಿ ಆರಂಭಗೊಂಡ ಸಹಕಾರ ಸಂಘವು ಪ್ರಸ್ತುತ ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು ಹಾಗೂ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ಸ್ವಂತ ಕಟ್ಟಡದಲ್ಲಿ ಶಾಖೆಗಳನ್ನು ಹೊಂದಿದ್ದು, ಸುಮಾರು 6800 ಕ್ಕಿಂತಲೂ ಮಿಕ್ಕಿ ಸದಸ್ಯರನ್ನು ಹೊಂದಿದೆ. ಒಟ್ಟು ಏಳು ವಲಯಗಳನ್ನಾಗಿ ಮಾಡಲಾಗಿದ್ದು, ಪ್ರತೀ ವಲಯಗಳಲ್ಲಿ ಒಂದೊಂದು ಶಾಖೆ ತೆರೆಯುವ ಇರಾದೆಯಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಬೆಳ್ಳಾರೆಯಲ್ಲಿ ಶಾಖೆ ತೆರೆಯಲಾಗುವುದು ಎಂದು ಅವರು ತಿಳಿಸಿದರು.

Leave a Response

error: Content is protected !!