ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ತಾಯಿಕುರಿತು ಅವಹೇಳನಕಾರಿಯಾಗಿ ಬರಹ :ರಾಘವೇಂದ್ರ ಭಟ್ ವಿರುದ್ಧ ಪ್ರಕರಣ ದಾಖಲು.

ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ತಾಯಿ
ಕುರಿತು ಅವಹೇಳನಕಾರಿಯಾಗಿ ಬರಹ :ರಾಘವೇಂದ್ರ ಭಟ್ ವಿರುದ್ಧ ಪ್ರಕರಣ ದಾಖಲು.

ಬೆಳ್ತಂಗಡಿ : 2012ರಲ್ಲಿ ಹತ್ಯೆಯಾದ ಸೌಜನ್ಯ ತಾಯಿ
ಕುರಿತು ಅವಹೇಳನಕಾರಿಯಾಗಿ ಸಂದೇಶ ಕಳುಹಿಹಿದವನ ವಿರುದ್ಧ ಪ್ರಕರಣ ದಾಖಲಾಗಿದೆ.ರಾಘವೇಂದ್ರ ಭಟ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳದಲ್ಲಿ ಹತ್ಯೆಯಾದ ಸೌಜನ್ಯಾ ಎಂಬವರ ತಾಯಿಯನ್ನು ಉದ್ದೇಶಿಸಿ ಅಕ್ಷೇಪಾರ್ಹ ಕಮೆಂಟ್ ಹಾಕಿದ್ದಾರೆ ಎಂದು
ಪ್ರಕರಣ ದಾಖಲಾಗಿದೆ.ಆ.28ರಂದು ಬಂಟ್ವಾಳ ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಅ.ಕ್ರ ನಂಬ್ರ 85/2023 ಕಲಂ: 509 ಐ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆನಡೆಸಲಾಗುತ್ತಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ