

ಪುತ್ತೂರು: ಪಿಕಪ್ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಮೃತ ಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಬನಾರಿ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕು ಶುಂಠಿಪಲಿಕೆ ನಿವಾಸಿ ಅಬ್ಬೂಬ್ಬಕರ್ ಅಪಘಾತದಲ್ಲಿ ಮೃತಪಟ್ಟವರು. ಅವರ ಪತ್ನಿ ಬಿಪಾತುಮ್ಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಬ್ಬೂಬ್ಬಕರ್ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಮೃತಪಟ್ಟಿದ್ದು, ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ದೇಹವನ್ನು ಇಡಲಾಗಿದೆ.
ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
add a comment