ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಫಿಕ್ಸ್ : ಪ್ರಮಾಣ ವಚನಕ್ಕೆ ಸಿದ್ಧತೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಫಿಕ್ಸ್ : ಪ್ರಮಾಣ ವಚನಕ್ಕೆ ಸಿದ್ಧತೆ.

ಕರ್ನಾಟಕದ ಮುಂದಿನ ಸಿಎಂ ಸಿದ್ದರಾಮಯ್ಯ ಅವರೇ ಆಗೋದು ಫಿಕ್ಸ್ ಆಗಿದೆ.
ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಪಕ್ಕಾ ಎನ್ನಲಾಗುತ್ತಿದ್ದು, ರಾಹುಲ್ ಗಾಂಧಿ ಸಭೆ ಬಳಿಕ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ನಾಳೆ ಮಧ್ಯಾಹ್ನ 3:30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.
ಮೇ 18ರ ನಾಳೆ ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆದಿದೆ. ವಿಧಾನಸೌಧ ಮುಂಭಾಗ ಅಥವಾ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ಒಂದು ವೇಳೆ ನಾಳೆ ತಪ್ಪಿದರೆ ಶನಿವಾರ ಅಂದರೆ ಮೇ 20ರಂದು ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆ ನಡೆದಿದೆ. ಶುಕ್ರವಾರ(ಮೇ 19) ಅಮಾವಾಸ್ಯೆ ಇರುವ ಹಿನ್ನಲೆ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರ‌ ಸಲಹೆ ನೀಡಿದ್ದಾರೆ
ಇನ್ನು ಅಧಿಕೃತವಾಗಿ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಘೋಷಣೆಯಾದರೆ ಅವರ ನಿವಾಸದ ಬಳಿ ಅಭಿಮಾನಿಗಳು ಬರುವ ಮುನ್ಸೂಚನೆ ಹಿನ್ನಲೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ.

ಡಿಕೆ ಶಿವಕುಮಾರ್​ಗೆ ಉಪಮುಖ್ಯಮಂತ್ರಿ ಪಟ್ಟ?

ಇನ್ನು ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಜೊತೆ ಎರಡು ಪ್ರಮುಖ ಖಾತೆಗಳನ್ನು ನೀಡಲಾಗುತ್ತದೆ. ಇನ್ನು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ ಎನ್ನಲಾಗಿದ್ದು, ನಾಳೆಯೇ ಸಿದ್ದರಾಮಯ್ಯನವರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ ಸಚಿವ ಸಂಪುಟ ರಚನೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯ