ರಾಜ್ಯ

ಸೌಜನ್ಯ ಪ್ರಕರಣ : ಮರುತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜ, ಪ್ರತಾಪ ಸಿಂಹ ನಾಯಕ್ ರಿಂದ ಸಿಎಂಗೆ ಮನವಿ.

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ಮನವಿ ಸಲ್ಲಿಸಿದ್ದಾರೆ.

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ 2012 ಅಕ್ಟೋಬರ್ 09 ರಂದು ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹಲವಾರು ಇಲಾಖೆಗಳಿಂದ ತನಿಖೆ ನಡೆದ ಬಳಿಕ 2013ರಲ್ಲಿ ಈ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಲಾಗಿತ್ತು. ಅಲ್ಲಿಂದ 2023 ರವರೆಗೂ ನಡೆದ ಸಿಬಿಐ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ದೋಷ ಮುಕ್ತಿಗೊಳಿಸಿ ನ್ಯಾಯಾಲಯವು ಆದೇಶ ನೀಡಿದೆ. ಈ ತನಿಖೆಯ ಫಲಶೃತಿಯ ಬಗ್ಗೆ ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷೆ ನೀಡಲು ಆಡಳಿತ ವ್ಯವಸ್ಥೆ ವಿಫಲವಾಗಿದೆ.
ಅದ್ದರಿಂದ ನಾಗರೀಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಮೃತ ಸೌಜನ್ಯಳಿಗೆ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ಉಲ್ಲೇಖಸಿದ್ದಾರೆ

Leave a Response

error: Content is protected !!