ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ
ರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ.
ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ
ತಂಡದ ಪ್ರಯತ್ನ ಯಶಸ್ವಿ.


ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ
ರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ ಡಾ.ರೇಣುಕಾ
ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ ತಂಡದ ಪ್ರಯತ್ನ
ಯಶಸ್ವಿಯಾಗಿರುವುದಾಗಿ ತಿಳಿದು ಬಂದಿದೆ. ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ
ಒಪ್ಪಿಗೆ ನೀಡಿದೆ. ರಾಜ್ಯ ಒಕ್ಕಲಿಗರ ಸಂಘದ
ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ
ಅಧ್ಯಕ್ಷತೆಯಲ್ಲಿ ಹದಿನೈದು ಜನರ ಸದಸ್ಯರುಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಸರಕಾರಕ್ಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆಯನ್ನು
ತಯಾರು ಮಾಡಿ ಸಲ್ಲಿಸಲಾಗಿತ್ತು.
ಈ ಪ್ರಸ್ತಾವನೆಯನ್ನು ಸಲ್ಲಿಸಲು ಡಾ.ರೇಣುಕಾ ಪ್ರಸಾದ್ ಕೆ.ವಿ ರವರ ಅವಿರತ ಪ್ರಯತ್ನದಿಂದ ಸರಕಾರಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ದ ಪಡಿಸಿ ತಪಾಸಣಾ ತಂಡಕ್ಕೆ ನೀಡಲಾಗಿತ್ತು. ಈ ವಿಶ್ವವಿದ್ಯಾಲಯ ಸ್ಥಾಪನಾ
ಸಮಿತಿಯಲ್ಲಿ ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನ
ಕಂಪ್ಯೂಟರ್ ವಿಭಾಗದ ಮುಖ್ಯಸ್ಥರು ಮತ್ತು ಮುಖ್ಯ
ಕಾರ್ಯನಿರ್ವಾಹಣಾಧಿಕಾರಿ, ವಿಶ್ವೇಶ್ವರಯ್ಯ ತಾಂತ್ರಿಕ
ವಿಶ್ವವಿದ್ಯಾಲಯದ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು
ಆದ ಡಾ.ಉಜ್ವಲ್ ಯು.ಜೆ ಸದಸ್ಯರಾಗಿ ಸೇವೆಸಲ್ಲಿಸುತ್ತಿದ್ದಾರೆ. ಈ ಒಂದು ಪ್ರಸ್ತಾವನೆಯನ್ನು ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಸಿ.ಎನ್, ಪ್ರಧಾನ
ಕಾರ್ಯದರ್ಶಿಗಳಾದ ಕೋನಪ್ಪ ರೆಡ್ಡಿ ಮತ್ತು
ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ ರವರ
ಸಹಿಯೊಂದಿಗೆ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.ಸರ್ಕಾರದ ಕೊಡುಗೆಗೆ ಹಾಗೂ ಸಹಕರಿಸಿದ ಪ್ರತಿಯೊಬ್ಬರಿಗೂ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ ಯವರು ಹರ್ಷ ವ್ಯಕ್ತಪಡಿಸಿರುತ್ತಾರೆ.