

ಸುಳ್ಯ ತಾಲೋಕಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಸುಳ್ಯದಿಂದ ಕೇರಳದ ಪಾಣತ್ತೂರು ಸಂಪರ್ಕಿಸುವ ಕಲ್ಲಪಳ್ಳಿಯಲ್ಲಿ ಗುಡ್ಡದಿಂದ ಮಣ್ಣು ಕುಸಿದು ರಸ್ತೆ ಸಂಚಾರದಲ್ಲಿ ತಡೆ ಉಂಟಾಗಿರುವುದಾಗಿ ತಿಳಿದು ಬಂದಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಇಲ್ಲಿ ಗುಡ್ಡ ಇನ್ನಷ್ಟು ಕುಸಿಯುವ ಅಪಾಯ ಎದುರಾಗಿದ್ದು ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ಪ್ರಯಾಣಿಸ ಬೇಕಿದೆ.



add a comment