
ಸುಳ್ಯದ ಹಾಗೂ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದ್ದಾರೆ ಅವರು ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಸರಕಾರದ ಯೋಜನೆಗಳು ರಾಜ್ಯದ ಜನರಿಗೆ ತಲುಪಬೇಕಾದರೇ ಇಲ್ಲಿಯೂ ಡಬಲ್ ಎಂಜಿನ್ ಸರಕಾರ ಮತ್ತೊಮ್ಮೆ ಅಧಿಕಾರ ಬರಬೇಕಿದೆ.
ಕಾಂಗ್ರೆಸ್ ಸರಕಾರ ಅಸ್ತಿತ್ವದಲ್ಲಿದ್ದಾಗ ಕೇಂದ್ರದ ಬಿಜೆಪಿ
ಸರಕಾರ ಜಾರಿಗೆ ತಂದ ಜನಪರ ಯೋಜನೆಗಳಿಗೆ ಬ್ರೇಕ್ ನೀಡಿತ್ತು. ಇಂತಹ ಸಮಸ್ಯೆ ಬಾರದಿರಲು ಡಬಲ್ ಎಂಜಿನ್ ಸರಕಾರವೇ ಬೇಕು , ಹಾಗಾಗಿ ಈ ದೇಶ ಹಾಗು ರಾಜ್ಯದ ರಕ್ಷಣೆಗಾಗಿ ಬಿಜೆ ಪಿ ಅಧಿಕಾರಕ್ಕೆ ಬರಲು ತಾವೆಲ್ಲ ಕಾರ್ಯೋನ್ಮುಖರಾಗಬೇಕು ಎಂದು ಕರೆ ನೀಡಿದರು.



ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಜಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಎಸ್. ಅಂಗಾರ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.