ಸುರತ್ಕಲ್ : ಅತಿ ವೇಗದಿಂದ ಚಲಿಸುತ್ತಿದ್ದ ಲಾರಿಯೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆದ್ದಾರಿ 66 ರ ಮುಕ್ಕ ಸಮೀಪ ಸಂಭವಿಸಿದೆ.
ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದೆ. ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಾರಿಯಡಿ ತೂರಿದ ಹಿನ್ನೆಲೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೆಸ್ಕಾಂಗೆ ಸೇರಿದ ಲಾರಿ ಇದಾಗಿದ್ದು, ವಿದ್ಯುತ್ ಕಂಬಗಳನ್ನು ಹೊತ್ತು ಸಾಗುತ್ತಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
add a comment