ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.

ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.

ಸುರತ್ಕಲ್ ಡಿಸೆಂಬರ್ 24: ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ನ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದ್ದು, ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡುವ ಹೋಗುವ ವೇಳೆ ಸಾವನಪ್ಪಿದ್ದಾರೆ.
ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು ಅಂಗಡಿಯಲ್ಲಿ ಇದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದ ತೀವ್ರ ಗಾಯಗೊಂಡಿದ್ದ ಜಲೀಲ್​ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಲೀಲ್​ ಸಾವನ್ನಪ್ಪಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯ